ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಸೇರಿದಂತೆ ಮೂವರ ವಿರುದ್ಧ ಪ್ರಕರಣ‌ ದಾಖಲು

Prasthutha|

- Advertisement -

ಉಡುಪಿ: ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಹಾಗೂ ಆಪ್ತರಾದ ಬಸವರಾಜ ಮತ್ತು ರಮೇಶ್ ವಿರುದ್ಧ ದೂರು ದಾಖಲಾಗಿದೆ.

ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 306 Rw 34 IPC ಯಂತೆ ಪ್ರಕರಣ ದಾಖಲಾಗಿದೆ.

- Advertisement -

ಉಡುಪಿ ಖಾಸಗಿ ಹೋಟೆಲ್ ನಲ್ಲಿ ಸಂತೋಷ್ ಪಾಟೀಲ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ಕಾರಣರಾದ ಕೆ.ಎಸ್ ಈಶ್ವರಪ್ಪ, ಬಸವರಾಜ್, ರಮೇಶ್ ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

Join Whatsapp