ಸ್ಯಾಂಟ್ರೊ ರವಿಗೆ 14 ದಿನ ನ್ಯಾಯಾಂಗ ಬಂಧನ

Prasthutha|

- Advertisement -

ಬೆಂಗಳೂರು: ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

Join Whatsapp