ಬೆಂಗಳೂರು: ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್ ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.
ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.