Home ಟಾಪ್ ಸುದ್ದಿಗಳು ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ : ಕೇಸರಿ ಶಾಲು ಹೆಗಲಿಗೆ ಹಾಕಿ ಅಚ್ಚರಿ...

ಬಿಜೆಪಿ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ : ಕೇಸರಿ ಶಾಲು ಹೆಗಲಿಗೆ ಹಾಕಿ ಅಚ್ಚರಿ ಮೂಡಿಸಿದ ಶಾಸಕ !

ಮೈಸೂರು: ಮೈಸೂರು ಬಿಜೆಪಿ ಘಟಕವು ವಿದ್ಯಾರಣ್ಯಾಪುರಂ ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಮೋದಿ ಯುಗ್ ಉತ್ಸವ್ ನಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.


ಒಂದೆಡೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಆರ್ ಎಸ್ ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿಯಲ್ಲಿ ನಿರತರಾಗಿದ್ದರೆ ಇತ್ತ ಜೆಡಿಎಸ್ ಶಾಸಕರೊಬ್ಬರು ಬಿಜೆಪಿ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಪಾಲ್ಗೊಂಡಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಜತೆ ವೇದಿಕೆ ಹಂಚಿಕೊಂಡು ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀವತ್ಸ ಅವರನ್ನು ಪಕ್ಕಕ್ಕೆ ಸರಿಸಿ ಅವರ ಆಸನದಲ್ಲಿ ಸಾ.ರಾ.ಮಹೇಶ್ ಕುಳಿತರು.


ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜು ಅವರೊಂದಿಗೆ ಕುಳಿತ ಸಾ.ರಾ.ಮಹೇಶ್ ಅವರು ಕೇಸರಿ ಶಾಲನ್ನು ಬಿಜೆಪಿ ಕಾರ್ಯಕರ್ತರಂತೆ ತನ್ನ ಹೆಗಲಿಗೆ ಹಾಕಿಕೊಳ್ಳುವ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದ್ದಾರೆ.

Join Whatsapp
Exit mobile version