Home ಟಾಪ್ ಸುದ್ದಿಗಳು ಖ್ಯಾತ ಬಹುಭಾಷಾ ನಟ ಶರತ್ ಬಾಬು ನಿಧನ

ಖ್ಯಾತ ಬಹುಭಾಷಾ ನಟ ಶರತ್ ಬಾಬು ನಿಧನ

ಬೆಂಗಳೂರು: ಕನ್ನಡದ ಖ್ಯಾತ ನಟ ಶರತ್ ಬಾಬು ನಿಧನರಾಗಿದ್ದಾರೆ.


ಮೇ 22ರಂದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ.


ನಟ ಶರತ್ ಬಾಬು ಅವರನ್ನು ಏಪ್ರಿಲ್ ಮೊದಲ ವಾರದಲ್ಲಿ ಬೆಂಗಳೂರಿನ ಚಿಕಿತ್ಸೆ ನೀಡಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಟ ಶರತ್ ಮೃತಪಟ್ಟಿದ್ದಾರೆ.
ಶರತ್ ಬಾಬು ಅವರು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ‘ಅಮೃತವರ್ಷಿಣಿ’ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದಾಗಿತ್ತು.

Join Whatsapp
Exit mobile version