Home ಟಾಪ್ ಸುದ್ದಿಗಳು ಕರ್ನಾಟಕ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

ಕರ್ನಾಟಕ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

ಬೆಂಗಳೂರು: ಕರ್ನಾಟಕದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಣಿಯಾಗುತ್ತಿದೆ. ತನ್ನ ಪ್ರಚಾರವನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ವಾರ್ ರೂಮ್ ತಂಡವನ್ನು ರಚಿಸಿದೆ. ಈ ತಂಡದ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ವಾರ್ ರೂಂ ಅನ್ನು ಸ್ಥಾಪಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗವನ್ನು ಮರುಸ್ಥಾಪಿಸಲಾಗಿದೆ. ಸಂವಹನ ಮತ್ತು ಸಾಮಾಜಿಕ ಮಾಧ್ಯಮ ತಂಡದ ಉಸ್ತುವಾರಿಯಾಗಿ ಪ್ರಿಯಾಂಕ್ ಖರ್ಗೆ ನೇಮಕಗೊಂಡರೆ, ವಕ್ತಾರರಾಗಿ ಲಾವಣ್ಯ ಬಲ್ಲಾಳ್, ಕವಿತಾ ರೆಡ್ಡಿ, ನಾಗಲಕ್ಷ್ಮಿ ಮತ್ತು ಐಶ್ವರ್ಯಾ ಮಹದೇವ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್, 2019ರ ಸೆಪ್ಟೆಂಬರ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ವೇಳೆ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ತಮ್ಮ ಸರ್ಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

Join Whatsapp
Exit mobile version