ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆ

Prasthutha|

ಚೆನ್ನೈ : ಮಾಜಿ ಐಎಎಸ್ ಅಧಿಕಾರಿ, ಸಿಎಎ/ಎನ್ ಆರ್ ಸಿ ಹೋರಾಟದ ಮುಂಚೂಣಿಯ ನಾಯಕ ಸಸಿಕಾಂತ್ ಸೆಂಥಿಲ್ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಸಮ್ಮುಖದಲ್ಲಿ ಸೆಂಥಿಲ್ ಕಾಂಗ್ರೆಸ್ ಸೇರ್ಪಡೆಗೊಂಡರು.

- Advertisement -

ದಕ್ಷಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಬಿಜೆಪಿಯ ಜನ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಥಿಲ್ ರಾಜೀನಾಮೆ ನೀಡಿದ್ದರು.

ರಾಜೀನಾಮೆ ನಂತರ ಕೆಲವು ದಿನಗಳ ನಂತರ ಸಿಎಎ/ಎನ್ ಆರ್ ಸಿ ವಿರೋಧಿ ಜನಾಂದೋಲನದಲ್ಲಿ ತೊಡಗಿಸಿಕೊಂಡು ಗಮನ ಸೆಳೆದಿದ್ದರು.

- Advertisement -

ಕರ್ನಾಟಕದಲ್ಲಿ ಅದೂ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಸುದ್ದಿಯಲ್ಲಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಬಿಜೆಪಿಗೆ ಸೇರ್ಪಡೆಗೊಂಡ ಬೆನ್ನಲ್ಲೇ, ಇದೇ ಭಾಗದಲ್ಲಿ ಸೇವೆ ಸಲ್ಲಿಸಿರುವ ಇನ್ನೋರ್ವ ಇನ್ನೋರ್ವ ಜನಪ್ರಿಯ ಮಾಜಿ ಅಧಿಕಾರಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಕುತೂಹಲ ಮೂಡಿಸಿದೆ.

Join Whatsapp