ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

Prasthutha|

ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ಬಂದ ಬೆನ್ನಲ್ಲೇ ಅಡ್ವೊಕೇಟ್ ಜನರಲ್ ಸ್ಥಾನಕ್ಕೆ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ನಂತರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸ್ಥಾನಕ್ಕೆ ಅರುಣ್ ಶ್ಯಾಮ್ ಅವರು ಕೂಡ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

- Advertisement -

ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರನೂ ಆಗಿರುವ ಶಶಿಕಿರಣ್ ಶೆಟ್ಟಿ ಅವರು ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

Join Whatsapp