ರಾಸಲೀಲೆ CD | ಸತೀಶ್ ಜಾರಕಿಹೊಳಿ ಹೇಳಿದ್ದೇನು?

Prasthutha|

- Advertisement -

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ಬಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅವರ ಸಹೋದರ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

“ಆತ ಬೆಳೆಯುವುದನ್ನು ಸಹಿಸಿಕೊಳ್ಳುವುದಕ್ಕೆ ಅವರ ಪಕ್ಷದವರಿಗೆ ಆಗಲಿಲ್ಲ, ಹಾಗಾಗಿ ಈ ಪಿತೂರಿ ನಡೆದಿದೆ. ಅವರು ನಿನ್ನೆಯೇ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ಕೊಟ್ಟಿದ್ದರೆ ಮುಗಿಯುತ್ತಿತ್ತು. ದೇಶದಲ್ಲಿ ಇಂತಹ ಘಟನೆಗಳು ಹೊಸದೇನೂ ಅಲ್ಲ. ರಾಜಕೀಯದಲ್ಲಿ ರಮೇಶ್ ಬಹಳಷ್ಟು ಬದಲಾಗಬೇಕಿದೆ ಎಂದರು.

- Advertisement -

ರಾಜ್ಯ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದ್ದು, ಸದ್ಯ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಈ ಘಟನೆ ಬಗ್ಗೆ ಬಿಜೆಪಿ ವರಿಷ್ಟರು ಹಲವು ತರಹದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Join Whatsapp