Home ಟಾಪ್ ಸುದ್ದಿಗಳು ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ: ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ...

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ: ದುಷ್ಕರ್ಮಿಗಳ ಪತ್ತೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿಯ ತಂಡ ಪೆಟ್ರೋಲ್ ಕ್ಯಾನ್ ಗಳನ್ನು ತಂದು ಬೆಂಕಿ ಹಚ್ಚಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ರಾತ್ರಿ 1. 23ರ ಸುಮಾರಿಗೆ ದುಷ್ಕರ್ಮಿಗಳು ಬಂದಿದ್ದು, ಎರಡು ಗಾಡಿಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಾರೆ, ಕೇವಲ ಮೂರ್ನಾಲ್ಕು ನಿಮಿಷದಲ್ಲಿ ಈ ದುಷ್ಕ್ರತ್ಯ ಎಸಗಿದ್ದಾರೆ. ಆ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಘಟನೆಯ ಬಗ್ಗೆ ಶಾಸಕ ಸತೀಶ್ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಘಟನೆ ಕುರಿತು ಆಗ್ನೇಯ ವಿಭಾಗ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ಶಾಸಕರ ಮನೆಯ ಹಿಂಬದಿಯ ಗೇಟಿನಿಂದ ಒಳಗೆ ನುಗ್ಗಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು. ಈ ಸಂಬಂಧ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಸತೀಶ್ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಪಡಿದಿದ್ದಾರೆ.

Join Whatsapp
Exit mobile version