ಬೆಳಗಾವಿ: ಅಶ್ಲೀಲ ವೆಬ್ ಸೈಟ್ ನ ಅಶ್ಲೀಲ ವಿಡಿಯೋಗಳ ಪೋಸ್ಟ್ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರಲು ಯತ್ನಿಸಿರುವ ಆರೋಪ ಕೇಳಿಬಂದಿದೆ.
ಈ ಬಗ್ಗೆ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ್ ತಳವಾರ್ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂತಹ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.
ಸದ್ಯ ಪ್ರಕರಣ ಸಂಬಂಧ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.