ಹಿಂದೂ ಪದದ ಅರ್ಥ: ಹೇಳಿಕೆ ವಾಪಸ್ ಪಡೆದ ಸತೀಶ್ ಜಾರಕಿಹೊಳಿ

Prasthutha|

ಬೆಳಗಾವಿ: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಿಂಪಡೆದುಕೊಂಡಿದ್ದಾರೆ. ಈ ಕುರಿತು ಸಿಎಂಗೆ ಪತ್ರ ಬರೆದಿದ್ದಾರೆ.

- Advertisement -


ಪತ್ರದಲ್ಲಿ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದ್ದು, ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಕೋರಿದ್ದಾರೆ. ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp