ಸತೀಶ್ ಜಾರಕಿಹೊಳಿ ಬೆಂಬಲಿಸಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ

Prasthutha|

ಚಿಕ್ಕೋಡಿ: ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಬೆಂಬಲಿಸಿ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿದ ಘಟನೆ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.

- Advertisement -


ಸತೀಶ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ಮಾನವ ಬಂಧುತ್ವ ವೇದಿಕೆ ಹಾಗೂ ದಲಿತಪರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ನಗರದ ಸಂಭಾಜೀ ವೃತ್ತದಲ್ಲಿ ಸತೀಶ್ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಯಿತು.


ನಿಪ್ಪಾಣಿಯ ಸಂಭಾಜಿ ಚೌಕದಿಂದ ತಹಶೀಲ್ದಾರ್ ಕಚೇರಿಯವರೆಗೆ ಪಾದಯಾತ್ರೆ ಮೂಲಕ ಸತೀಶ್ ಬೆಂಬಲಿಸಿ ಪ್ರತಿಭಟನಾ ಜಾಥಾ ನಡೆಯಿತು. ಬಳಿಕ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು. ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Join Whatsapp