ಜೈಲಿನಲ್ಲಿ ವಿಶೇಷ ಆಹಾರಕ್ಕಾಗಿ ಸತ್ಯೇಂದರ್ ಜೈನ್ ಸಲ್ಲಿಸಿದ್ದ ಅರ್ಜಿ ವಜಾ

Prasthutha|

ನವದೆಹಲಿ: ನ್ಯಾಯಾಂಗ ಬಂಧನದಲ್ಲಿರುವಾಗ ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಆಹಾರವನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಜೈಲಿನಲ್ಲಿರುವ ದೆಹಲಿ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದರ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.

- Advertisement -

ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು  ನ್ಯಾಯಾಂಗ ಬಂಧನದ ಸಮಯದಲ್ಲಿ ವಿಶೇಷ ಆಹಾರಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದರು.

ಸತ್ಯೇಂದರ್ ಜೈನ್ ತಮ್ಮ ಧಾರ್ಮಿಕ ನಂಬಿಕೆಗಳಿಗೆ ಅನುಗುಣವಾಗಿ ಉಪವಾಸ ಆಚರಿಸುವ ಬಗ್ಗೆ ವಿನಂತಿಸಿರುವುದರ ಬಗ್ಗೆ ಕೇಂದ್ರ ಕಾರಾಗೃಹದ ಅಧೀಕ್ಷಕರ ಕಚೇರಿಯಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ತಿಹಾರ್ ಜೈಲು ಆಡಳಿತವು ಹೇಳಿದೆ. ಆದ್ದರಿಂದ, ಸೆರೆಮನೆಯ ಆಡಳಿತವು ಅಂತಹ ಉಪವಾಸಕ್ಕೆ ಅನುಮತಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ನ್ಯಾಯಾಲಯ ಹೇಳಿದೆ.

Join Whatsapp