ಸೌದಿ ಅರೇಬಿಯಾ: ಗುಂಡಿನ ದಾಳಿ ನಡೆಸಿ ಓರ್ವನ ಹತ್ಯೆ

Prasthutha|

ರಿಯಾದ್: ಸೌದಿ ರಾಜಧಾನಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

- Advertisement -

ಇಬ್ಬರ ನಡುವೆ ನಡೆದ ಜಗಳವು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಗುಂಡಿನ ದಾಳಿ ನಡೆಸಿದ ಸೌದಿ ಪ್ರಜೆಯನ್ನು ಭದ್ರತಾ ಪಡೆಗಳು ಬಂಧಿಸಿವೆ.

ಇಬ್ಬರು ವ್ಯಕ್ತಿಗಳ ನಡುವಿನ ಮಾತಿನ ಚಕಮಕಿ ಗುಂಡಿನ ದಾಳಿ ನಡೆದು ಓರ್ವ ವ್ಯಕ್ತಿಯ ಸಾವಿಗೆ ಕಾರಣವಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಆರೋಪಿಯು ಮಾತಿನ ಚಕಮಕಿ ವೇಳೆ ತನ್ನ ಕೈಯಲ್ಲಿದ್ದ ಬಂದೂಕಿನಿಂದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿ ಆರೋಪಿಯನ್ನು ಪಬ್ಲಿಕ್ ಪ್ರಾಸಿಕ್ಯೂಷನ್‌ಗೆ ಒಪ್ಪಿಸಲಾಗಿದೆ.

Join Whatsapp