ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್

Prasthutha|

ಮಂಗಳೂರು: ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

- Advertisement -

ವಿಶೇಷ (ಮಕ್ಕಳ) ನ್ಯಾಯಾಲಯ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ.

ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು 2023ರ ಜೂನ್‌ 16ರಂದು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ. ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

- Advertisement -

2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಘಟನೆ ನಡೆದಿತ್ತು. ಪ್ರಕರಣವನ್ನು ಮೊದಲಿಗೆ ಬೆಳ್ತಂಗಡಿ ಠಾಣಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ 2013ರ ನವೆಂಬರ್‌ 6ರಂದು ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ತನಿಖಾಧಿಕಾರಿಗಳು ಕಾರ್ಕಳ ಮೂಲದ ಸಂತೋಷ್ ರಾವ್ ಎಂಬಾತನನ್ನು ಆರೋಪಿಯಾಗಿ ಗುರುತಿಸಿದ್ದರು. 2023ರ ಜೂನ್‌ 16ರಂದು ಆತನನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿತ್ತು

Join Whatsapp