ಸಾವರ್ಕರ್ ದೇಶಕ್ಕೆ ದ್ರೋಹ ಬಗೆದಿದ್ದಾರೆ: ರಾಹುಲ್ ಗಾಂಧಿ

Prasthutha|

ಮುಂಬೈ: ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರೊಂದಿಗೆ ಕ್ಷಮೆಯಾಚಿಸುವ ಪತ್ರಕ್ಕೆ ಸಹಿ ಹಾಕುವ ಮೂಲಕ ಎಂ.ಕೆ. ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ಸಾವರ್ಕರ್ ದ್ರೋಹ ಬಗೆದಿದ್ದಾರೆ ಎಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

- Advertisement -

ಅಲ್ಲದೆ, ಸಾವರ್ಕರ್ ಬ್ರಿಟಿಷರಿಗೆ ಬರೆದ ಪತ್ರ ಎಂದು ಹೇಳಿಕೊಂಡು ಮಾಧ್ಯಮ ಪ್ರತಿನಿಧಿಗಳಿಗೆ ಒಂದು ಕಾಗದವನ್ನು ರಾಹುಲ್ ಗಾಂಧಿ ತೋರಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾವರ್ಕರ್ ಬ್ರಿಟಿಷರೊಂದಿಗಿನ ಭಯದಿಂದ ಸರ್, ನಾನು ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ಬೇಡಿಕೊಳ್ಳುತ್ತೇನೆ ಎಂದು ಪತ್ರಕ್ಕೆ ಸಹಿ ಹಾಕುವ ಮೂಲಕ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಬಗೆದಿದ್ದಾರೆ ಎಂದಿದ್ದಾರೆ

- Advertisement -

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸಾವರ್ಕರ್ ಬಗ್ಗೆ ಗಾಂಧಿ ಅವರ ಅಭಿಪ್ರಾಯಗಳನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ನಾಚಿಕೆಯಿಲ್ಲದೆ ಸುಳ್ಳು ಹೇಳುತ್ತಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಕಿಡಿಕಾರಿದ್ದಾರೆ.

Join Whatsapp