ಸಾವರ್ಕರ್​​, ಹೆಡ್ಗೇವಾರ್​​ ಸ್ವಾತಂತ್ರ್ಯ ಹೋರಾಟಗಾರರು, ದಾಖಲೆ ಒದಗಿಸಲು ನಾನು ಸಿದ್ಧ: ರೋಹಿತ್ ಚಕ್ರತೀರ್ಥ

Prasthutha|

ಶಿವಮೊಗ್ಗ: ಮಕ್ಕಳಲ್ಲಿ ರಾಷ್ಟ್ರೀಯತೆಯನ್ನು ಬೆಳೆಸಲು ದಿಗ್ಗಜರ ಪಾಠ ಸೇರಿಸಿದ್ದೆವು. ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದ್ರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿನ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೇಳಿದರು.

- Advertisement -

 ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಮತ್ತು ಕೇಶವ ಹೆಡ್ಗೇವಾರ್ ಅವರ ಪಾಠ ತೆಗೆಯಲು ಸರ್ಕಾರ ಮುಂದಾಗಿದೆ. ಯಾಕೆ ಅಂತ ಅದನ್ನ ಸರ್ಕಾರಕ್ಕೆ ನೀವು ಕೇಳಬೇಕು. ಇವರು ಸ್ವಾತಂತ್ರ್ಯ ಹೋರಾಟಗಾರರು ಅಲ್ಲ ಎನ್ನಲು ಯಾರಿಗೂ ಸಾಧ್ಯವಿಲ್ಲ. ಅದಕ್ಕೆ ಸೂಕ್ತ ದಾಖಲೆ ಒದಗಿಸಲು ನಾನು ಸಿದ್ದನಿದ್ದೇನೆ. ಮಕ್ಕಳಲ್ಲಿ ರಾಷ್ಟ್ರೀಯತೆಯನ್ನ ಬಳಸಲು ನಮ್ಮ‌ ಪಠ್ಯ ಪುಸ್ತಕ ಪರಿಷ್ಕರಣೆಯಿಂದ ಈ ಇಬ್ಬರು ದಿಗ್ಗಜರ ಪಾಠ ಸೇರಿಸಿದ್ದೆವು. ಈಗ ಅದನ್ನ ಸರ್ಕಾರ ತೆಗೆಯಲು ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದಿದ್ದಾರೆ.

ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ

- Advertisement -

ಪರಿಷ್ಕರಣೆ ಮಾಡುವಾಗ ಹಿಂದಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರನ್ನ ಆಹ್ವಾನಿಸಿದ್ದೆವು. ಆಗ ಅವರು ನಮ್ಮ ಆಹ್ವಾನಕ್ಕೆ ಪ್ರತಿಕ್ರಿಯಿಸಿರಲಿಲ್ಲ. ಈಗಿನ ಪಠ್ಯ ಪುಸ್ತಕ ಪರಿಷ್ಕರಣ ಸಮಿತಿಯು ಒಂದು ವೇಳೆ ಚರ್ಚೆಗೆ ಆಹ್ವಾನಿಸಿದರೆ ನಾನು ಸಿದ್ದ. ಪಠ್ಯ ಸೇರಿಸಲು ಸ್ಪಷ್ಟ ಕಾರಣ ಕೊಡಲು ನಾನು ಸಿದ್ದನಿದ್ದೇನೆ ಎಂದು ಹೇಳಿದರು.

ಪಠ್ಯ ಪರಿಷ್ಕರಣೆಯನ್ನ ಜನ ಸಾಮಾನ್ಯರು ಒಪ್ಪಿಕೊಂಡರೆ ಒಳ್ಳೆಯದು. ಆದರೆ ಸರ್ಕಾರ ಪ್ರಜಾಪ್ರಭುತ್ವದ ರೀತಿಯಲ್ಲಿ ಆಹ್ವಾನಿಸಿದರೆ ನಾನು ಮೌನಿಯಾಗಿರಲ್ಲ. ಪ್ರಜಾಪ್ರಭುತ್ವದ ರೀತಿಯಲ್ಲಿ ಚರ್ಚೆ ನಡೆದರೆ ಅಭ್ಯಂತರವಿಲ್ಲ ಎಂದಿದ್ದಾರೆ.

Join Whatsapp