ಕಾಂಗ್ರೆಸ್ ಫ್ಲೆಕ್ಸ್’ನಲ್ಲಿ ಸಾವರ್ಕರ್ ಫೋಟೋ: ಬಿಜೆಪಿಯ ಕುತಂತ್ರ ಎಂದ ಜೈರಾಮ್ ರಮೇಶ್

Prasthutha|

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆಗೆ ಶುಭಕೋರಿ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್’ನಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಾವರ್ಕರ್ ಫೋಟೋ ಅಳವಡಿಸಿಕೊಂಡಿರುವುದು ಬಿಜೆಪಿಯ ಕುತಂತ್ರವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

- Advertisement -

ಕಾಂಗ್ರೆಸ್ ಫ್ಲೆಕ್ಸ್’ನಲ್ಲಿ ಸಾವರ್ಕರ್ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿಯ ಡರ್ಟಿ ಟ್ರಿಕ್ಸ್ ಡಿಪಾರ್ಟ್’ಮೆಂಟ್ ಕಾಂಗ್ರೆಸ್ ಶಾಸಕರ ಹೆಸರಲ್ಲಿ ಫೇಕ್ ಪೋಸ್ಟರ್ ತಯಾರಿಸಿತ್ತು. ಈ ಕುರಿತು ಕಾಂಗ್ರೆಸ್ ಪಕ್ಷವು ತಕ್ಷಣವೇ ಪೊಲೀಸ್ ದೂರನ್ನೂ ದಾಖಲಿಸಿದೆ. ಆದರೆ ಈ ಮಾಹಿತಿಯನ್ನು ನಿಮಗೆ ತಿಳಿಸಲು ಡಿಜಿಟಲ್ ಇಂಡಿಯಾದ ದ್ಯೋತಕದಂತಿರಬೇಕಿದ್ದ ರಾಜ್ಯದಲ್ಲಿನ ನೆಟ್‌ವರ್ಕ್‌ ಸಮಸ್ಯೆಯಿಂದ ತಡವಾಗಿದೆ’ ಎಂದು ಜೈರಾಮ್ ಟ್ವೀಟ್’ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp