ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
‘2024ರ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಣಾಳಿಕೆ ಹಾಗೂ ಹಿಂದಿನ ಬಜೆಟ್ಗಳ ‘ಕಾಪಿ-ಪೇಸ್ಟ್’ ಬಜೆಟ್ ಇದಾಗಿದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.
‘ತಮ್ಮ ನಿಕಟವರ್ತಿಗಳನ್ನು ತೃಪ್ತಿಪಡಿಸುವ ಬಜೆಟ್ ಇದಾಗಿದ್ದು, ಜನ ಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ’ ಎಂದು ಹೇಳಿದ್ದಾರೆ.
“Kursi Bachao” Budget.
— Rahul Gandhi (@RahulGandhi) July 23, 2024
– Appease Allies: Hollow promises to them at the cost of other states.
– Appease Cronies: Benefits to AA with no relief for the common Indian.
– Copy and Paste: Congress manifesto and previous budgets.