‘ಒಂದೇ ಕುಟುಂಬದಲ್ಲಿ ಎರಡು ಮರಣ’
ಉಪ್ಪಿನಂಗಡಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಧಾರ್ಮಿಕ ವಿದ್ವಾಂಸ ಸೈಯದ್ ಸಾದಾತ್ ಅಲಿ ತಂಙಳ್ ಕರ್ವೇಲ್ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪುತ್ತೂರು ತಾಲೂಕು ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಎಂಬಲ್ಲಿ ಸಾದಾತ್ ಅಲಿ ತಂಙಳ್ ಸಂಚರಿಸುತ್ತಿದ್ದ ಆಟೊ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿತ್ತು. ಈ ವೇಳೆ ಸಾದಾತ್ ಅಲಿ ತಂಙಳ್ ರಿಗೆ ಗಂಭೀರ ಗಾಯಗಳಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ಸಾದತ್ ಅಲಿ ತಂಙಳ್ ಅವರ ಸಹೋದರಿಯ ಮಗಳು ಹೃದಯಾಘಾತದಿಂದ ಮೃತಪಟ್ಟಿದ್ದಳು.