22,217 ಚುನಾವಣಾ ಬಾಂಡ್ ಖರೀದಿ: ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ ಎಸ್ ಬಿಐ

Prasthutha|

ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ದತ್ತಾಂಶವನ್ನು ಎಸ್ ಬಿಐ, ಸುಪ್ರೀಂ ಕೋರ್ಟ್ ಗೆ ನೀಡಿದೆ. ಬುಧವಾರ ಎಸ್ ಬಿಐ ಅಧ್ಯಕ್ಷ ದಿನೇಶ್ ಕುಮಾರ್ ಖಾರಾ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

- Advertisement -


ಬಾಂಡ್ ಗಳ ಮುಖ ಬೆಲೆ, ಅದನ್ನು ಖರೀದಿಸಿದವರ ಹೆಸರು, ಯಾವ ಪಕ್ಷಕ್ಕೆ ನೀಡಲಾಗಿದೆ, ಹಾಗೂ ದಿನಾಂಕಗಳನ್ನೊಳಗೊಂಡ ವಿವರಗಳು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿವೆ.


2019 ರ ಏಪ್ರಿಲ್ 14- ಫೆ.15, 2024 ರ ಅವಧಿಯವರೆಗೂ ನಗದಾಗಿ ಪರಿವರ್ತಿಸಿಕೊಳ್ಳಲಾದ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ತಲುಪಿದ್ದು, ಈ ಅವಧಿಯಲ್ಲಿ ಒಟ್ಟು 22,217 ಚುನಾವಣಾ ಬಾಂಡ್ ಗಳನ್ನು ಖರೀದಿಸಲಾಗಿದೆ, 22,030 ಬಾಂಡ್ ಗಳನ್ನು ಈ ವರೆಗೂ ನಗದಾಗಿ ಪರಿವರ್ತನೆ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ.

- Advertisement -

ಸುಪ್ರೀಂ ಕೋರ್ಟ್‌ನ ಆದೇಶದಂತೆ ಚುನಾವಣಾ ಬಾಂಡ್‌ ಪಡೆದವರ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಸಲ್ಲಿಸಿತ್ತು.ಈ ಮಾಹಿತಿಯನ್ನು ಮಾರ್ಚ್‌ 12 ರ ಸಂಜೆಯೊಳಗಾಗಿ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿತ್ತು.

Join Whatsapp