ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್ ಅವರ ಮಧ್ಯಂತರ ಜಾಮೀನು ಅರ್ಜಿಯ ಕುರಿತಾದ ಆದೇಶವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಮುಂದೂಡಿದೆ. ನ್ಯಾಯಾಲಯವು ಜುಲೈ 7, 2022 ರಂದು ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ.
ದೇಶದ್ರೋಹದ ಕಾನೂನಿನ ಬಗ್ಗೆ ಸುಪ್ರೀಂ ಕೋರ್ಟ್ ನ ಇತ್ತೀಚಿನ ನಿರ್ದೇಶನವನ್ನು ಗಮನದಲ್ಲಿಟ್ಟುಕೊಂಡು ಶಾರ್ಜೀಲ್ ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯವು ಜೂನ್ 6ರಂದು ಆದೇಶವನ್ನು ಕಾಯ್ದಿರಿಸಿತ್ತು.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಬ್ ರಾವತ್ ಅವರು ಶುಕ್ರವಾರ ಆದೇಶವನ್ನು ಪ್ರಕಟಿಸಬೇಕಿತ್ತು. ತಿಹಾರ್ ಜೈಲಿನಿಂದ ಶರ್ಜೀಲ್ ಇಮಾಮ್ ಅವರನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿತ್ತು. ಜಾಮೀನು ಅರ್ಜಿ ಮತ್ತು ಪ್ರಕರಣದ ವಿಚಾರಣೆಯ ಆದೇಶವನ್ನು ಜುಲೈ 7 ಕ್ಕೆ ಮುಂದೂಡಲಾಗಿದೆ ಎಂದು ವಿಸಿ ಮೂಲಕ ವಿಚಾರಣೆಯ ಸಮಯದಲ್ಲಿ ತಿಳಿಸಲಾಯಿತು.