ಬಿಬಿಸಿ ನಿರ್ಮಾಣದ  ಸಾಕ್ಷ್ಯಚಿತ್ರಕ್ಕೆ ನಿರ್ಬಂಧ: ಪಿಐಎಲ್‌ ವಿಚಾರಣೆಗೆ ಸಮ್ಮತಿ ಸೂಚಿಸಿದ ಸುಪ್ರೀಂ

Prasthutha|

ನವದೆಹಲಿ: ಬಿಬಿಸಿ ನಿರ್ಮಾಣ ಮಾಡಿರುವ 2002ರ ಗೋಧ್ರೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

- Advertisement -

ತಮ್ಮ ಅರ್ಜಿಗಳ ತುರ್ತು ವಿಚಾರಣೆಗೆ ಕೋರಿದ್ದ ವಕೀಲರಾದ ಎಂ.ಎಲ್. ಶರ್ಮಾ ಮತ್ತು ಸಿ.ಯು. ಸಿಂಗ್ ಅವರ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರಿದ್ದ ತ್ರಿಸದಸ್ಯ ಪೀಠ ಪುರಸ್ಕರಿಸಿದೆ.

ಮೋದಿ ಕುರಿತಾದ ಬಿಬಿಸಿ ನಿರ್ಮಿಸಿರುವ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರದ ಯೂಟ್ಯೂಬ್ ವಿಡಿಯೊ, ಲಿಂಕ್ ಹಂಚಿಕೊಂಡಿದ್ದ ಟ್ವಿಟರ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಜನವರಿ 21ರಂದು ನಿರ್ದೇಶನ ನೀಡಿತ್ತು.

Join Whatsapp