ಬಿಲ್ಕಿಸ್ ಬಾನು ಅತ್ಯಾಚಾರಿಗಳಿಗೆ ಶಿಕ್ಷೆ ವಿನಾಯಿತಿಯನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂ

Prasthutha|

ನವದೆಹಲಿ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ನೀಡಲಾದ ಶಿಕ್ಷೆ ವಿನಾಯಿತಿಯನ್ನು ಪ್ರಶ್ನಿಸಿರುವ ಮಹಿಳಾ ಸಂಘಟನೆಯ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಸಿ.ಟಿ. ರವಿಕುಮಾರ್ ಅವರಿದ್ದ ಪೀಠ ಪ್ರಮುಖ ಅರ್ಜಿ ಜೊತೆ ಈ ಅರ್ಜಿಯ ವಿಚಾರಣೆಯನ್ನು ನಡೆಸುವುದಾಗಿ ಹೇಳಿದೆ.

- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳ ಶಿಕ್ಷೆ ವಿನಾಯಿತಿ ಪ್ರಶ್ನಿಸಿ ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟ ಸಲ್ಲಿಸಿರುವ ಅರ್ಜಿಯನ್ನು ಉನ್ನತ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಬಿಲ್ಕೀಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ, ಬಿಡುಗಡೆ ಮಾಡಿರುವ ತನ್ನ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ (ಪಿಐಎಲ್‌) ಸಂಬಂಧಿಸಿದಂತೆ ಗುಜರಾತ್‌ ಸರ್ಕಾರ ಸಲ್ಲಿಸಿರುವ ಪ್ರತಿಕ್ರಿಯೆಯಲ್ಲಿ ವಾಸ್ತವಾಂಶಗಳೇ ಕಾಣೆಯಾಗಿವೆ ಎಂದು ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

Join Whatsapp