ನೋಟು ಅಮಾನ್ಯೀಕರಣದ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ, ಆರ್ ಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Prasthutha|

ನವದೆಹಲಿ: 1000 ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ ಸರ್ಕಾರದ 2016 ರ ನಿರ್ಧಾರಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗೆ ನಿರ್ದೇಶನ ನೀಡಿದೆ.

- Advertisement -

ಕೇಂದ್ರ ಸರ್ಕಾರದ 2016 ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ತನ್ನ ತೀರ್ಪನ್ನು ಕಾಯ್ದಿರಿಸಿದ ನ್ಯಾಯಮೂರ್ತಿ ಎಸ್.ಎ. ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್ ಮತ್ತು ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು, ಯೂನಿಯನ್ ಆಫ್ ಇಂಡಿಯಾ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನುರಿತ ವಕೀಲರಿಗೆ ಸಂಬಂಧಿತ ದಾಖಲೆಗಳನ್ನು ಹಾಜರುಪಡಿಸುವಂತೆ ನಿರ್ದೇಶಿಸಿದೆ.

ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಜರುಪಡಿಸಲಾಗುವುದು ಎಂದು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಹೇಳಿದರು. 2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ ಘೋಷಿಸಿದ ನೋಟು ಅಮಾನ್ಯೀಕರಣ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 58 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಿತ್ತು.

Join Whatsapp