ಜುಲೈ 20 ರವರೆಗೆ ಆಲ್ಟ್ ನ್ಯೂಸ್ ಝುಬೈರ್ ವಿರುದ್ಧ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

Prasthutha|

ಹೊಸದಿಲ್ಲಿ: 5 ಪ್ರಕರಣಗಳಿಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮುಹಮ್ಮದ್ ಝುಬೈರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೋಮವಾರ ಉತ್ತರ ಪ್ರದೇಶ ಪೊಲೀಸರಿಗೆ ನಿರ್ದೇಶನ ನೀಡಿದೆ.

- Advertisement -

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು  ಯುಪಿ ಪೊಲೀಸರು ದಾಖಲಿಸಿರುವ ಪ್ರಕರಣಗಳನ್ನು  ರದ್ದುಗೊಳಿಸುವಂತೆ ಕೋರಿ ಝುಬೈರ್  ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ಬಗ್ಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವನ್ನು ಜುಲೈ 20 ರಂದು ವಿಚಾರಣೆ ನಡೆಸಲಾಗುವುದು ಎಂದೂ ಜಸ್ಟಿಸ್ ಚಂದ್ರ ಚೂಡ್ ಈ ಸಂದರ್ಭದಲ್ಲಿ ಹೇಳಿದ್ದಾರೆ. “ಎಲ್ಲಾ ಎಫ್ ಐಆರ್ ಗಳ ವಿಷಯಗಳು ಒಂದೇ ರೀತಿ ಇರುವಂತೆ ತೋರುತ್ತಿದೆ. ಒಂದು ಪ್ರಕರಣದಲ್ಲಿ ಜಾಮೀನು ಸಿಗುತ್ತಿದ್ದಂತೆಯೇ ಮತ್ತೊಂದು ಪ್ರಕರಣದಲ್ಲಿ ಅವರು ರಿಮ್ಯಾಂಡ್ ಗೆ ಒಳಗಾಗುತ್ತಿದ್ದಾರೆ. ಈ ವಿಷವರ್ತುಲ ಹೀಗೆಯೇ ಮುಂದುವರಿಯುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.



Join Whatsapp