ನವ ದೆಹಲಿ: ಅದಾನಿ-ಹಿಂಡೆನ್’ಬರ್ಗ್ ವಿವಾದದ ತನಿಖೆಯನ್ನು ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೆಕ್ಯುರಿಟೀಸ್ ಅಂಡ್ ಎಕ್ಸ್’ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಗೆ ನಿರ್ದೇಶನ ನೀಡಿದೆ.
ನಿವೃತ್ತ ನ್ಯಾಯಾಧೀಶ ಎ.ಎಂ ಸಪ್ರೆ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ನೇಮಿಸಲಾಗಿದೆ. ಜತೆಗೆ ಈಗಿನ ವಿದ್ಯಮಾನಗಳ ಸ್ಥಿತಿಗತಿ ಬಗ್ಗೆ ಇನ್ನೆರಡು ತಿಂಗಳೊಳಗೆ ವರದಿ ನೀಡುವಂತೆ ಸೆಬಿಗೆ ಸೂಚಿಸಿದೆ.
ತಜ್ಞರ ಸಮಿತಿಯಲ್ಲಿ ಒಪಿ ಭಟ್, ಜೆಪಿ ದೇವಧರ್, ಕೆವಿ ಕಾಮತ್, ನಂದನ್ ನಿಲೇಕಣಿ, ಸೋಮಶೇಖರ್ ಸುಂದರೇಶನ್ ಇದ್ದಾರೆ. ಅದಾನಿ-ಹಿಂಡೆನ್ ಬರ್ಗ್ ವಿವಾದಕ್ಕೆ ಕಾರಣ, ಹೂಡಿಕೆದಾರರ ಹಿತ ರಕ್ಷಣೆ, ಮಾರುಕಟ್ಟೆ ವೈಫಲ್ಯದ ಬಗ್ಗೆ ಸಮಿ ತನಿಖೆ ನಡೆಸಲಿದೆ.