ರಾಮ ಮಂದಿರ ನೇರ ಪ್ರಸಾರ ಕಾರ್ಯಕ್ರಮ ತಡೆಯುವಂತಿಲ್ಲ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಆದೇಶ

Prasthutha|

ನವದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿತ್ತು. ಇದೀಗ ಈ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -


ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದೆ ಸುಪ್ರೀಂ, ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ ಎಂದು ಹೇಳಿದೆ.


ಇತರ ಸಮುದಾಯದ ಜನರು ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದನ್ನು ತಡೆಯುವುದು ಅಥವಾ ಅನುಮತಿ ನೀಡದಿರುವುದು ತಪ್ಪು ಎಂದು ಹೇಳಿದೆ. ಈ ಬಗ್ಗೆ ಸರಿಯಾದ ಕಾರಣ ಇದ್ದರೆ ತಿಳಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಹೇಳಿದೆ.



Join Whatsapp