ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿ.ಕೆ.ಶಿವಕುಮಾರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.

- Advertisement -


ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ ಸಿ ಶರ್ಮಾ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

ಸಿಬಿಐ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 19, 2023 ರಂದು ಕರ್ನಾಟಕ ಹೈಕೋರ್ಟ್ ಡಿಕೆಶಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.



Join Whatsapp