ಜಮ್ಮು-ಕಾಶ್ಮೀರ ಡಿಲಿಮಿಟೇಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

Prasthutha|

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಲು ಕೈಗೊಂಡ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

- Advertisement -


ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ನ್ಯಾಯಮೂರ್ತಿ ಎ.ಎಸ್.ಓಕಾ ಅವರನ್ನೊಳಗೊಂಡ ನ್ಯಾಯಪೀಠವು ಇತ್ತೀಚಿನ ಅಧಿಸೂಚನೆಗಳಿಗೆ ಅನುಸಾರವಾಗಿ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶವನ್ನು ಹೊರಡಿಸಿದೆ.


ತೀರ್ಪು ಓದಿದ ನ್ಯಾಯಮೂರ್ತಿ ಓಕಾ, ಅರ್ಜಿಯನ್ನು ವಜಾಗೊಳಿಸುವುದು 370 ನೇ ವಿಧಿಗೆ ಸಂಬಂಧಿಸಿದಂತೆ ತೆಗೆದುಕೊಂಡ ನಿರ್ಧಾರಗಳಿಗೆ ಪ್ರತಿಕೂಲವಾಗಿದೆ ಎಂದು ಭಾವಿಸಬಾರದು ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದರು.

Join Whatsapp