ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠವು ಈ ಆದೇಶವನ್ನು ನೀಡಿದೆ.
ಈ ಅರ್ಜಿಯನ್ನು ಸ್ವೀಕರಿಸಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ. ಇಡೀ ಮನವಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ. ಹೀಗಾಗಿ ವಜಾಗೊಳಿಸಲಾಗಿದೆ ಎಂದು ಪೀಠ ಹೇಳಿದೆ
ನ್ಯಾಯಮೂರ್ತಿ ಚಂದ್ರಚೂಡ್ ವಿರುದ್ಧ ರಶೀದ್ ಖಾನ್ ಪಠಾಣ್ ಎಂಬವರು ಭಾರತದ ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದರು. ಅದರ ಆಧಾರದ ಮೇಲೆ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ದೂರು ಸಾಮಾಜಿಕ ಮಾಧ್ಯಮ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ವೈರಲ್ ಆಗಿತ್ತು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಇತರ ಹಲವಾರು ಬಾರ್ ಅಸೋಸಿಯೇಷನ್ ಗಳು ಈ ಆರೋಪಗಳನ್ನು ನಿರಾಕರಿಸಿದ್ದು, ಈ ವರದಿ ಆಧಾರರಹಿತ ಎಂದು ತಳ್ಳಿ ಹಾಕಿತ್ತು.