► ಹಿಂದೂ ಧರ್ಮ ಪರಿಷತ್ ಕೋರಿದ್ದ ಅರ್ಜಿ
ಹೊಸದಿಲ್ಲಿ: ಭಾರತದಲ್ಲಿನ ಕ್ರೈಸ್ತ ಮಿಷನರಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಎಸ್ ಬೋಪಣ್ಣ ಅವರ ಪೀಠವು ಹಿಂದೂ ಧರ್ಮ ಪರಿಷತ್ ಸಲ್ಲಿಸಿದ ಮನವಿಯನ್ನು ಆಲಿಸಲು ನಿರಾಕರಿಸದ್ದು, ಈ ಅರ್ಜಿಯನ್ನು ಸಲ್ಲಿಸಿದ್ದಕ್ಕಾಗಿ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಿತು. ನಂತರ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು.
ದೇಶದ ಏಕತೆ, ಸಾರ್ವಭೌಮತೆ ಮತ್ತು ಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು ಕ್ರಿಶ್ಚಿಯನ್ ಮಿಷನರಿಗಳ ಆದಾಯದ ಮೇಲೆ ವಿಶೇಷ ನಿಗಾ ವಹಿಸಬೇಕು ಮತ್ತು ಅವರ ಚಟುವಟಿಕೆಗಳ ಕುರಿತಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರವು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದರು.