2002 ಗುಜರಾತ್ ಗಲಭೆ: ಜಾಕಿಯಾ ಜಾಫ್ರಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಗುಜರಾತ್ ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಲೀನ್ ಚಿಟ್ ನೀಡಿರುವ ಎಸ್ ಐಟಿ ತನಿಖೆಯನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್ ಸಂಸದ ದಿ.ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಎಂ.ಕೆ.ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರ ನೇತೃತ್ವದ ಪೀಠ, ವಿಶೇಷ ತನಿಖಾ ತಂಡ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಒಪ್ಪಿಕೊಂಡ ಮ್ಯಾಜಿಸ್ಟ್ರೇಟ್ ನಿರ್ಧಾರವನ್ನು ಎತ್ತಿ ಹಿಡಿದಿದೆ.

  2021 ರ ಡಿಸೆಂಬರ್ 9 ರಂದು ಗುಜರಾತ್ ಗಲಭೆಯ ಹಿಂದಿನ ದೊಡ್ಡ ಪಿತೂರಿಯ ಬಗ್ಗೆ ತನಿಖೆ ನಡೆಸುವಂತೆ ಕೋರಿ ಝಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿತ್ತು. ಶುಕ್ರವಾರ ಪೀಠ, ಅರ್ಜಿ ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.  

- Advertisement -

ಜಾಫ್ತಿ ಅವರ ಅರ್ಜಿಯು ವಿಚಾರಣೆಗೆ ಅರ್ಹವಾಗಿಲ್ಲ ಎಂದು ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2002ರ ಫೆಬ್ರವರಿ 27ರಂದು ಗುಜರಾತ್ ನ ಗೋಧ್ರ ರೈಲ್ವೆ ನಿಲ್ದಾಣದ ಬಳಿ ಸಬರಮತಿ ಏಕ್ಸ್ ಪ್ರೆಸ್ ರೈಲಿನ ಎಸ್- 6 ಕೋಚ್ ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವಿಗೀಡಾಗಿದ್ದರು. ಮರುದಿನ ಅಹ್ಮದಾಬಾದ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹತ್ಯಾಕಾಂಡದಲ್ಲಿ ಸಾವಿಗೀಡಾದ 68 ಜನರಲ್ಲಿ ಕಾಂಗ್ರೆಸ್ ಮಾಜಿ ಸಂಸದ ಎಹಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದರು.

Join Whatsapp