ನವಾಬ್ ಮಲಿಕ್ ಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ

Prasthutha|

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು 3 ತಿಂಗಳವರೆಗೆ ವಿಸ್ತರಿಸಿದೆ.

- Advertisement -


ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ನವಾಬ್ ಮಲಿಕ್ ಆರೋಗ್ಯ ಕಾರಣ ನೀಡಿ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ನಂತರ ಜುಲೈ 13ರಂದು ಜಾಮೀನು ವಿಚಾರವಾಗಿ ನವಾಬ್ ಮಲಿಕ್ ಸುಪ್ರೀಂಗೆ ಅರ್ಜಿ ಸಲ್ಲಿಸಿದರು.

Join Whatsapp