Home ಟಾಪ್ ಸುದ್ದಿಗಳು ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ದರ್ಶನ್ ಸೇರಿ ಏಳು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ದರ್ಶನ್‌, ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ

ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್​ ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು (ಜನವರಿ 24) ನಡೆದಿದೆ. ಈ ವೇಳೆ ಸುಪ್ರೀಂಕೋರ್ಟ್ ಏಳು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

Join Whatsapp
Exit mobile version