ರಾಹುಲ್ ವಿರುದ್ಧದ ಮಾನನಷ್ಟ ಪ್ರಕರಣ: ಪೂರ್ಣೇಶ್ ಮೋದಿಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ

Prasthutha|

ನವದೆಹಲಿ: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಆರಂಭಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಪ್ರಶಾಂತ್ ಕುಮಾರ್ ಮಿಶ್ರಾ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ.
ಅರ್ಜಿ ವಿಚಾರಣೆ ಪ್ರಾರಂಭಿಸಿದ ಸರ್ವೋಚ್ಛ ನ್ಯಾಯಾಲಯವು ಗುಜರಾತ್ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿಯವರ ಮನವಿಯ ಮೇರೆಗೆ ದೂರುದಾರ ಮತ್ತು ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 4 ಕ್ಕೆ ಮುಂದೂಡಿದೆ.

- Advertisement -

2019ರಲ್ಲಿ ಲೋಕಸಭೆಗೆ ನಡೆದ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ರಾಹುಲ್ ಅವರು 2019ರ ಏಪ್ರಿಲ್ 13ರಂದು ಕೋಲಾರದಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ‘ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು



Join Whatsapp