ಫೆಬ್ರವರಿ 20ರವರೆಗೆ ಬಿಕ್ರಮ್ ಸಿಂಗ್ ಮಜಿಥಿಯಾ ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ

Prasthutha|

ನವದೆಹಲಿ: ಡ್ರಗ್ಸ್ ಪ್ರಕರಣದ ಆರೋಪಿ ಶಿರೋಮಣಿ ಅಕಾಲಿದಳದ ಪ್ರಮುಖ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಕೊನೆಗೂ ಸುಪ್ರೀಂಕೋರ್ಟ್’ನಿಂದ  ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.  ಆದರೆ ನಿರೀಕ್ಷಣಾ ಜಾಮೀನಿನ ಅವಧಿಯು ಫೆಬ್ರವರಿ 20ಕ್ಕೆ ಮುಕ್ತಾಯವಾಗಲಿದ್ದು, ಫೆಬ್ರವರಿ 21ರಂದು ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರಾಗಿ ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

- Advertisement -

ಮಜಿಥಿಯಾ ಜಾಮೀನು ಅರ್ಜಿಯನ್ನು ಕಳೆದ ಸೋಮವಾರವಷ್ಟೇ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್  ರದ್ದುಗೊಳಿಸಿತ್ತು. ಇದರಿಂದಾಗಿ ಪಂಜಾಬ್ ಅಸೆಂಬ್ಲಿ ಚುನಾವಣೆ 2022ಕ್ಕೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಬಿಕ್ರಮ್ ಸಿಂಗ್ ಮಜಿಥಿಯಾ ಅವರಿಗೆ ಹಿನ್ನಡೆಯಾಗಿತ್ತು. ಇದಕ್ಕೂ ಮುನ್ನ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮೈಥಿಯಾಗೆ ಮಧ್ಯಂತರ ಜಾಮೀನು ನೀಡಿತ್ತು ಮತ್ತು ತನಿಖೆಗೆ ಸಹಕರಿಸುವಂತೆ ಸೂಚಿಸಿತ್ತು.

ಎನ್ ಡಿಪಿಎಸ್ ಪ್ರಕರಣದಲ್ಲಿ ಪಂಜಾಬ್ ಪೊಲೀಸರು ದಾಖಲಿಸಿರುವ ಆರೋಪ ಎದುರಿಸುತ್ತಿರುವ ಮಜಿಥಿಯಾ ಪ್ರಸ್ತುತ ಮಧ್ಯಂತರ ನಿರೀಕ್ಷಣಾ ಜಾಮೀನಿನ ಮೇಲೆ ಇದ್ದಾರೆ. ಮಜಿಥಿಯಾ ವಿರುದ್ಧ ಡ್ರಗ್ಸ್ ಪ್ರಕರಣ ದಾಖಲಾಗಿದೆ. ಅವರ ವಿರುದ್ಧದ ಎಫ್ಐಆರ್ ಕೂಡ ಹಾಕಲಾಗಿದ್ದು, ಇದನ್ನು ಮಜಿಥಿಯಾ ಅಂದಿನಿಂದ ರಾಜಕೀಯ ಪ್ರೇರಿತ ಎಂದು ಸಮರ್ಥಿಸಿಕೊಂಡಿದ್ದಾರೆ

- Advertisement -

ಶಿರೋಮಣಿ ಅಕಾಲಿದಳದ ಪ್ರಧಾನ ಕಾರ್ಯದರ್ಶಿಯಾಗಿರುವ ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಪಕ್ಷದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಸೋದರ ಮಾವ ಮತ್ತು ಮಾಜಿ ಕೇಂದ್ರ ಸಚಿವ ಹರ್ಸಿಮ್ರತ್ ಕೌರ್ ಬಾದಲ್ ಅವರ ಸಹೋದರ. 2007-2017ರ ಅವಧಿಯಲ್ಲಿ ಪಂಜಾಬ್ ಕ್ಯಾಬಿನೆಟ್ನಲ್ಲಿ ಕಂದಾಯ, ಪುನರ್ವಸತಿ ಮತ್ತು ವಿಪತ್ತು ನಿರ್ವಹಣೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವರಾಗಿದ್ದರು.

Join Whatsapp