ತಮಿಳುನಾಡು: ಬಲವಂತದ ಮತಾಂತರ ಅರ್ಜಿ ವಜಾಗೊಳಿಸಿದ ಸುಪ್ರೀಮ್ ಕೋರ್ಟ್

Prasthutha|

ನವದೆಹಲಿ: ಹಿಂದೂಗಳನ್ನು ಆಮಿಷವೊಡ್ಡಿ ಬಲವಂತದಿಂದ ಮತಾಂತರಗೊಳಿಸಲಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ ಹೈಕೋರ್ಟ್’ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

- Advertisement -

ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ಪೀಠ, ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿಗಳಿಗಿಂತ ಪ್ರಚಾರ ಪಡೆಯುವಂತಾಗಲು ಸಲ್ಲಿಸಲಾಗಿದೆ. ಇದರಿಂದ ಸೌಹಾರ್ದತೆಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲ ಸಿ.ಆರ್. ಜಯಸುಕಿನ್ ಅರ್ಜಿಯನು ಹಿಂಪಡೆಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು ಈ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಆದೇಶಿಸಿದ್ದಾರೆ.

- Advertisement -

ಕ್ರೈಸ್ತ ಮಿಶನರಿಗಳ ಮೇಲೆ ನಿಗಾ ವಹಿಸಲು ಮತ್ತು ಮೇಲ್ವಿಚಾರಣೆಗಾಗಿ ಸ್ವತಂತ್ರ ಮಂಡಳಿಯನ್ನು ಸ್ಥಾಪಿಸಬೇಕು. ಇದರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕಳೆದ ವರ್ಷ ಮದ್ರಾಸ್ ಹೈಕೋರ್ಟ್’ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.



Join Whatsapp