Home ಟಾಪ್ ಸುದ್ದಿಗಳು ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಜಾರಿ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಜಾರಿ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೂಚನೆ ನೀಡಲು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.


ಇದು ನ್ಯಾಯಾಲಯ ತೀರ್ಮಾನಿಸುವಂತಹ ವಿಚಾರವಲ್ಲ ಎಂದು ನ್ಯಾ. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ ವಿವರಿಸಿದೆ.
ಕರ್ನಾಟಕದಲ್ಲಿ ಹಿಜಾಬ್ ವಿವಾದವಾದ ಬಳಿಕ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.

Join Whatsapp
Exit mobile version