ಉತ್ತರ ಪ್ರದೇಶ: ಕಟ್ಟಡ ತೆರವು ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಮ್ ಕೋರ್ಟ್ ನಕಾರ

Prasthutha|

ಲಖನೌ: ರಾಜ್ಯಾದ್ಯಂತ ಕಟ್ಟಡ ತೆರವು ಕಾರ್ಯಾಚರಣೆಗೆ ಮಧ್ಯಾಂತರ ತಡೆ ನೀಡಲು ಸುಪ್ರೀಮ್ ಕೋರ್ಟ್ ನಿರಾಕರಿಸಿದ್ದು, ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವುದನ್ನು ತಡೆಯುವ ಓಮ್ನಿಬಸ್ ಆದೇಶವನ್ನು ಕಳುಹಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

- Advertisement -

ಕಟ್ಟಡ ತೆರವುಗೊಳಿಸದಂತೆ ಉತ್ತರ ಪ್ರದೇಶಕ್ಕೆ ಸೂಚಿಸುವಂತೆ ಕೋರಿ ಸುಪ್ರೀಮ್ ಕೋರ್ಟ್’ಗೆ ಜಮೀಯತ್ ಉಲಮಾ ಇ ಹಿಂದ್ ಸಂಘಟನೆಯ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಮೂರ್ತಿಗಳಾದ ಬಿ.ಆರ್. ಗವಾಯಿ, ಪಿ.ಎಸ್. ನರಸಿಂಹ ಅವರನ್ನೊಳಗೊಂಡ ಪೀಠ, ಮುಂದಿನ ವಿಚಾರಣೆಯನ್ನು ಆಗಸ್ಟ್ 10 ರಂದು ನಡೆಸುವುದಾಗಿ ತಿಳಿಸಿದೆ.

ಕಾನೂನಿನ ನಿಯಮವನ್ನು ಪ್ರತಿಯೊಬ್ಬರೂ ಅನುಸರಿಸಬೇಕು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅಧಿಕಾರಗಳಿಗೆ ಪೀಠ ಓಮ್ನಿಬಸ್ ಆದೇಶವನ್ನು ಕಳುಹಿಸಲಾಗದು ಎಂದ ಪೀಠ, ನಾವು ಅಂತಹ ಆದೇಶವನ್ನು ಜಾರಿಗೊಳಿಸಿದರೆ, ನಿಯಮ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುವುದನ್ನು ನಾವು ತಡೆದಂತೆ ಅಲ್ಲವೆ ಎಂದು ಪ್ರಶ್ನಿಸಿದೆ.

- Advertisement -

ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಹೊರಿಸಿ ಹಲವರ ಆಸ್ತಿಗಳನ್ನು ಧ್ವಂಸಗೊಳಿಸುತ್ತಿರುವುದನ್ನು ತಡೆಯಲು ಜಿಲ್ಲಾಡಳಿತಕ್ಕೆ ಸೂಚಿಸುವಂತೆ ಕೋರಿ ಮುಸ್ಲಿಮ್ ಸಂಘಟನೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಮ್ ಕೋರ್ಟ್ ನಡೆಸುತ್ತಿದೆ.



Join Whatsapp