ರಾಣಾ ಅಯ್ಯೂಬ್ ವಿರುದ್ಧದ ವಿಚಾರಣೆ ರದ್ದುಗೊಳಿಸಲು ಸುಪ್ರೀಂಕೋರ್ಟ್ ನಕಾರ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002 ರ ಅಡಿಯಲ್ಲಿ ಗಾಜಿಯಾಬಾದ್’ನ ವಿಶೇಷ ನ್ಯಾಯಾಲಯವು ಪತ್ರಕರ್ತೆ ಮತ್ತು ಲೇಖಕಿ ರಾಣಾ ಅಯ್ಯೂಬ್ ಅವರ ವಿರುದ್ಧ ಪ್ರಾರಂಭಿಸಿದ್ದ ವಿಚಾರಣೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

- Advertisement -


ತನ್ನ ವಿರುದ್ಧದ ನ್ಯಾಯಾಲಯದ ಸಮನ್ಸ್ ಅನ್ನು ಪ್ರಶ್ನಿಸಿ ರಾಣಾ ಅಯ್ಯೂಬ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ವಿ ರಾಮಸುಬ್ರಮಣಿಯನ್ ಮತ್ತು ಜೆ.ಬಿ. ಪರ್ದಿವಾಲಾ ಅವರ ವಿಭಾಗೀಯ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು. ಇಂದು ನ್ಯಾಯಮೂರ್ತಿ ರಾಮಸುಬ್ರಮಣಿಯನ್ ತೀರ್ಪು ಪ್ರಕಟಿಸಿದ್ದಾರೆ.
ರಾಣಾ ಅವರ ಪರವಾಗಿ ಹಾಜರಾದ ಹಿರಿಯ ವಕೀಲೆ ವೃಂದಾ ಗ್ರೋವರ್, ತಮ್ಮ ಕಕ್ಷಿದಾರರ ವಿರುದ್ಧವಾಗಿ ಸಮನ್ಸ್ ಜಾರಿ ಮಾಡಲು ಉತ್ತರ ಪ್ರದೇಶ ನ್ಯಾಯಾಲಯಕ್ಕೆ ‘ಯಾವುದೇ ನ್ಯಾಯವ್ಯಾಪ್ತಿ ಇಲ್ಲ’ ಎಂದು ವಾದಿಸಿದ್ದರು.


ಆದರೆ ಈ ವಾದವನ್ನು ಒಪ್ಪದ ನ್ಯಾಯಪೀಠವು, ಅರ್ಜಿದಾರರಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಮುಕ್ತವಾದ ಸ್ವಾತಂತ್ರ್ಯವಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

Join Whatsapp