5,8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಸುಪ್ರೀಂಕೋರ್ಟ್’ಗೆ ಅರ್ಜಿ: ಪರೀಕ್ಷೆಗೆ ತಡೆಯಾಜ್ಞೆ ನೀಡಲು ನ್ಯಾಯಾಲಯ ನಿರಾಕರಣೆ

Prasthutha|

ನವದೆಹಲಿ: ರಾಜ್ಯ ಬೋರ್ಡ್ ಪಠ್ಯಕ್ರಮವನ್ನು ಅಧ್ಯಯನ ಮಾಡುತ್ತಿರುವ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸರ್ಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

- Advertisement -


ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು ಹೈಕೋರ್ಟ್ ಆದೇಶದ ವಿರುದ್ಧ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸಲ್ಲಿಸಿದ್ದ ಮನವಿಯನ್ನು ಮಾರ್ಚ್ 27 ರಂದು ಆಲಿಸಲು ಒಪ್ಪಿಕೊಂಡಿದೆ.


ಈ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. ಆದರೆ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿತು.



Join Whatsapp