ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಹಿಂದಿನ ಆದೇಶದಂತೆ ಜೂನ್ 2ರಂದು ಜೈಲಿಗೆ ಹೋಗಬೇಕಾಗುತ್ತದೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅವರು ಜೈಲು ಸೇರಿದ್ದರು. ಕೆಲವೇ ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದರು.
ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದರು. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.