ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004′ ಅಸಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್ ಮಾರ್ಚ್ 22 ರಂದು ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ನೀಡಿದೆ.
‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004’ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಡೆ ನೀಡಿದೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಿರ್ದಿಷ್ಟ ಶಿಕ್ಷಣವನ್ನು ಆಯ್ಕೆ ಮಾಡುವ ಅಧಿಕಾರ ಇದ್ದೇ ಇರುತ್ತದೆ. ಹಾಗಾಗಿ ಹೈಕೋರ್ಟ್ ನ ತೀರ್ಪು 17 ಲಕ್ಷ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಹಕ್ಕುಗಳು ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವಲ್ಲಿ ರಾಜ್ಯಗಳು ಕಾನೂನುಬದ್ಧ ಹಿತಾಸಕ್ತಿಗಳನ್ನು ಹೊಂದಿವೆ. ಈ ಉದ್ದೇಶಕ್ಕಾಗಿ ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಬೇಕೇ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂದು ಪೀಠ ಹೇಳಿದೆ.