Home ಟಾಪ್ ಸುದ್ದಿಗಳು 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.


5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು. ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Join Whatsapp
Exit mobile version