Home ಟಾಪ್ ಸುದ್ದಿಗಳು ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ.ಕೆ.ಆರ್.ವೇಣುಗೋಪಾಲ್: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

ಬೆಂಗಳೂರು ವಿವಿ ಕುಲಪತಿಯಾಗಿ ಪ್ರೊ.ಕೆ.ಆರ್.ವೇಣುಗೋಪಾಲ್: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆಯಾಜ್ಞೆ

ಬೆಂಗಳೂರು: ಪ್ರೊ.ಕೆ.ಆರ್.ವೇಣುಗೋಪಾಲ್ ಅವರ ಬೆಂಗಳೂರು ವಿವಿಯ ಕುಲಪತಿ ನೇಮಕವನ್ನು ರದ್ದುಗೊಳಿಸಿದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ಮಾರ್ಚ್ 17 ರಂದು ಹೈಕೋರ್ಟ್ ಆದೇಶವು ಏಕಸದಸ್ಯ ಪೀಠ ನೇಮಕ ರದ್ದತಿ ಆದೇಶವನ್ನು ಎತ್ತಿಹಿಡಿದಿತ್ತು.

ರಾಜ್ಯಪಾಲರು ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದೇ ಕುಲಪತಿಯನ್ನು ನೇಮಕ ಮಾಡಿದ್ದಾರೆ ಹೈಕೋರ್ಟ್ ಆದೇಶದಲ್ಲಿ ತಿಳಿಸಿತ್ತು. ಈ ಕುರಿತು ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ಸೋಮವಾರ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಬೆಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಹುದ್ದೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದರಿಂದ ವಿಶ್ವ ವಿದ್ಯಾಲಯದ ಆಡಳಿತಾತ್ಮಕ ಕೆಲಸಗಳು ಕೂಡ ಸ್ಥಗಿತಗೊಂಡಿದ್ದವು. ಇದೀಗ ಸುಪ್ರೀಂ ಕೋರ್ಟ್ ತಡೆಯಾಜ್ಞೆಯಿಂದ ವಿವಿ ಕುಲಪತಿಯಾಗಿ ಮುಂದುವರಿಯಲು ಪ್ರೊ.ಕೆಆರ್ ವೇಣುಗೋಪಾಲ್ ಅವರಿಗೆ ಹಾದಿ ಸುಗಮವಾಗಿದೆ.

Join Whatsapp
Exit mobile version