ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ

Prasthutha|

ಬೆಂಗಳೂರು: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

- Advertisement -


ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.


ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

Join Whatsapp