Home ಟಾಪ್ ಸುದ್ದಿಗಳು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜುಲೈ 26ರ ತನಕ ಸುಪ್ರೀಂ ತಡೆಯಾಜ್ಞೆ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಜುಲೈ 26ರ ತನಕ ಸುಪ್ರೀಂ ತಡೆಯಾಜ್ಞೆ

ವಾರಾಣಸಿ: ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ ಐ) ಇಂದು ಬೆಳಗ್ಗೆ 7 ಗಂಟೆಗೆ ಆರಂಭಿಸಿರುವ ವೈಜ್ಞಾನಿಕ ಸಮೀಕ್ಷೆಯನ್ನು ಸುಪ್ರೀಂ ಕೋರ್ಟ್ ಇಂದು ಎರಡು ದಿನಗಳ ಕಾಲ ತಡೆಹಿಡಿದಿದೆ.


ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು (ASI– Archaeological Survey of India) ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದರು.


ಮುಸ್ಲಿಂ ಅರ್ಜಿದಾರರ ಪರವಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತಡೆಯಾಜ್ಞೆ ನೀಡಿದೆ. ಸಮೀಕ್ಷೆ ಬೇಕೆ? ಬೇಡವೆ? ಎಂಬ ಮುಂದುವರೆದ ವಾದವನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಹೇಳಿದೆ.

Join Whatsapp
Exit mobile version