Home ಟಾಪ್ ಸುದ್ದಿಗಳು ಕನ್ವರ್ ಯಾತ್ರಾ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶನ: ಯುಪಿ ಆದೇಶಕ್ಕೆ ಸುಪ್ರೀಂ ತಡೆ

ಕನ್ವರ್ ಯಾತ್ರಾ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶನ: ಯುಪಿ ಆದೇಶಕ್ಕೆ ಸುಪ್ರೀಂ ತಡೆ

ದೆಹಲಿ: ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂದು ಆದೇಶಿಸಿರುವ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.


ಕನ್ವರ್ ಯಾತ್ರೆಯ ಹಾದಿಯಲ್ಲಿರುವ ಆಹಾರ ಮಳಿಗೆ, ಅಂಗಡಿ ಮಾಲೀಕರು ಅವರ ಮತ್ತು ಅಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಪೊಲೀಸರು ಆದೇಶಿಸಿದ್ದರು.


ಸರಕಾರ ನೀಡಿದ ನಿರ್ದೇಶನವು ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂವಿಧಾನಿಕ ಮತ್ತು ಕಾನೂನು ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಕನ್ವರ್ ಯಾತ್ರಾ ಮಾರ್ಗದಲ್ಲಿ ನಾಮಫಲಕಗಳ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದೆ

Join Whatsapp
Exit mobile version